ರಾಮನಗರ: ಜನತಾದರ್ಶನ ಕಾರ್ಯಕ್ರಮದ ವೇಳೆ ಸಲ್ಲಿಕೆಯಾದ ಅಹವಾಲು ಮತ್ತು ಕುಂದು ಕೊರತೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್‌ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ಶನಿವಾರ ಶ್ಯಾನುಭೋಗನಹಳ್ಳಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆದ ಜನ ತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಮಾಡಲಾಗುತ್ತಿದೆ. ಜನರು ಸಲ್ಲಿಸಿದ ಅಹವಾಲುಗಳನ್ನು ಅಧಿಕಾರಿಗಳ ವ್ಯಾಪ್ತಿಯಲ್ಲಿ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದರು. ಗೃಹಲಕ್ಷ್ಮಿ, ಗೃಹಜ್ಯೋತಿ, ರಸ್ತೆ, ಕಂದಾಯ, ಅರಣ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಕೃಷಿ, ಪೊಲೀಸ್ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಪರಿಹಾರ ನೀಡುವಂತಹ ಸಮಸ್ಯೆಗಳನ್ನು ಜನತಾದರ್ಶನ ಕಾರ್ಯಕ್ರಮಲ್ಲಿಯೇ ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ಯಾನುಭೋಗನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಕಾರ್ತಿಕ್‌ರೆಡ್ಡಿ, ಉಪವಿಭಾಗಾಧಿಕಾರಿ ಬಿನೋಯ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಹನುಮೇಗೌಡ, ತಹಶೀಲ್ದಾರರ ತೇಜಸ್ವಿನಿ, ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಸೇರಿದಂತೆಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.