ಪಾಟ್ನಾ: ಬಿಹಾರ ವಿಧಾನ ಸಭೆಗೆ ನಡೆಯುತ್ತಿರುವ ಚುನಾವಣೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬುಧವಾರ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಸಚಿವ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 57 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್ ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ.
ಜೆಡಿಯುನ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ ಎಂದು ಜನತಾದಳ ಯುನೈಟೆಡ್ನ ಕಾರ್ಯಕಾರಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ.
ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿರ್ಣಯಿಸಿದ ನಂತರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ನಮ್ಮ ಎರಡನೇ ಪಟ್ಟಿಯೂ ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.