ಹೊಸದಿಲ್ಲಿ : ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಜೈಲು ಸೇರಿದ್ದ ಬಳಿಕ ಚಂಪೈ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ೧೫೨ ದಿನಗಳ ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.