Wednesday, March 11, 2026
Google search engine

HomeUncategorizedರಾಷ್ಟ್ರೀಯಮಹಾರಾಷ್ಟ್ರ ರಾಜ್ಯಪಾಲರಾಗಿ ಜಿಷ್ಣು ದೇವ್‌ ವರ್ಮಾ ಪ್ರಮಾಣವಚನ ಸ್ವೀಕಾರ

ಮಹಾರಾಷ್ಟ್ರ ರಾಜ್ಯಪಾಲರಾಗಿ ಜಿಷ್ಣು ದೇವ್‌ ವರ್ಮಾ ಪ್ರಮಾಣವಚನ ಸ್ವೀಕಾರ

ಮುಂಬಯಿ: ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಜಿಷ್ಣು ದೇವ್‌ ವರ್ಮಾ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಲೋಕಭವನದ ದರ್ಬಾರ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್‌ನ  ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್‌ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಜಿಷ್ಣು ದೇವ್‌ ವರ್ಮಾ ಅವರು ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ಭಾರತೀಯ ನೌಕಾಪಡೆಯಿಂದ ನೂತನ ರಾಜ್ಯಪಾಲರಿಗೆ ಗೌರವ ವಂದನೆ ಅರ್ಪಿಸಲಾಯಿತು. ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌, ಡಿಸಿಎಂಗಳಾದ ಏಕನಾಥ್‌ ಶಿಂಧೆ ಮತ್ತು ಸುನೇತ್ರಾ ಪವಾರ್‌ ಉಪಸ್ಥಿತರಿದ್ದು ನೂತನ ರಾಜ್ಯಪಾಲರನ್ನು ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular