ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಅರ್.ನಗರ : ಕೆ.ಅರ್.ನಗರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಯ ಕುರಿತು ಚರ್ಚಿಸುವ ಸಲುವಾಗಿ ಸಭೆಯನ್ನು ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವರಾಮ್ ತಿಳಿಸಿದ್ದಾರೆ
ಸೆ. 4ರ ಗುರುವಾರ ಮಧ್ಯಾಹ್ನ 2-30ರ ಸುಮಾರಿಗೆ ಮಾಜಿ ಸಚಿವ ಸಾರಾ ಮಹೇಶ್, ಆದಿಚುಂಚನಗಿರಿ ಮೈಸೂರು ಶಾಖೆ ಮಠದ ಸೋಮನಾಥೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಂಘದ ಕಾರ್ಯಕಾರಿ ಮಂಡಳಿ ಸಭೆ ಮತ್ತು ಸಮುದಾಯದ ಮುಖಂಡರ ಸಭೆಯನ್ನು ಕರೆಯಲಾಗಿದೆ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.