ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸತತವಾಗಿ ಆರೇಳು ವರ್ಷದಿಂದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಸಮಗ್ರ ಪಾರಿತೋಷಕ ಪ್ರಶಸ್ತಿಯನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಕೆ.ಕೃಷ್ಣಯ್ಯ ಪ್ರಶಂಸೆಯ ನುಡಿಗಳನ್ನು ನುಡಿದರು.
ಅವರು ಪಟ್ಟಣದ ಶ್ರೀ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ 2025-26 ನೇ ಸಾಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಮಗ್ರ ಪಾರಿತೋಷಕ ಪ್ರಶಸ್ತಿ ಪಡೆದಿರುವುದಕ್ಕೆ ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಮಾತನಾಡಿದರು.
ಆ.29ರಿಂದ 30ರವರೆಗೆ ಎರಡುಗಳ ವರೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು 17 ಕ್ರೀಡೆಗಳಲ್ಲಿ 14 ಪ್ರಥಮ ಸ್ಥಾನ ಪಡೆದರೇ ನಾಲ್ಕೈದು ದ್ವಿತೀಯ ಸ್ಥಾನ ಪಡೆದು ಕೊಂಡು ಆವಳಿ ತಾಲ್ಲೂಕಿನಲ್ಲಿಯೇ ಮೇಲುಗೈ ಸಾಧಿಸಿದ್ದಾರೆ ಇದು ಹೆಮ್ಮೆ ಪಡುವ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.
‘ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಅಗತ್ಯ. ಗೆಲ್ಲುವ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಂಡರೆ ಖಂಡಿತ ಜಯ ಸಿಗುತ್ತದೆ. ವಿದ್ಯಾರ್ಥಿಗಳ ಸರ್ವತ್ತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿ ಇರುವ ವಿದ್ಯಾರ್ಥಿನಿಯರನ್ನು ಪೋಷಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಬಳಿಕ ಉಪನ್ಯಾಸಕ ಹಾಗೂ ಕ್ರೀಡಾ ಕಾರ್ಯದರ್ಶಿ ಡಿ.ಶ್ರೀನಿವಾಸ್ ಮಾತನಾಡಿ ವಿದ್ಯಾರ್ಥಿಗಳು ಆರೋಗ್ಯವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿನಿಯರು ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ಹೇಳಿದರು.
ಕ್ರೀಡಾಪಟುಗಳು ಕ್ರೀಡೆಯನ್ನು ಸವಾಲಾಗಿ ಸ್ವೀಕರಿಸಿ ತಾಲ್ಲೂಕು ಮಟ್ಟದ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರಲ್ಲದೆ ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.
ಗುಂಡು ಎಸತ : ಅಮೂಲ್ಯ ಪ್ರಥಮ, ಡಿಸ್ಕ್ ಥ್ರೋ : ಅಮೂಲ್ಯ ಪ್ರಥಮ, ಲಾಂಗ್ ಜಂಪ್ : ಪ್ರೇಮ ದ್ವಿತೀಯ, 800 ಮೀ ಓಟ : ಯಶಸ್ವಿನಿ ದ್ವಿತೀಯ, ಜಾವಲಿನ್ : ಚಂದನ ಪ್ರಥಮ, 100ಮೀ : ಚಿಂತನ ಪ್ರಥಮ, 200ಮೀ ಪ್ರೇಮ ದ್ವಿತೀಯ, 400 ಮೀ.ಓಟ : ಲಿಖಿತ ತೃತೀಯ, ಲಾಂಗ್ ಜಂಪ್ : ಶಾಲಿನಿ ದ್ವಿತೀಯ, ವಾಲಿಬಾಲ್ ಪ್ರಥಮ, 1500 ಮೀ ಓಟ ಪ್ರಥಮ, ಬಾಲ್ ಬ್ಯಾಡ್ಮಿಂಟನ್ ಪಥಮ, ಖೋಖೊ ಪ್ರಥಮ, ಥ್ರೋ ಬಾಲ್ ದ್ವಿತೀಯ, 4×100 ರಿಲೇ ಓಟ ಪ್ರಥಮ ಸ್ಥಾನ ಪಡೆದು ಕೊಂಡು ಸಮಗ್ರ ಪ್ರಶಸ್ತಿ ಮುಡಿಗೇರಿಸಿ ಕೊಂಡಿದ್ದಾರೆ ಎಲ್ಲಾ ಕ್ರೀಡೆಯಲ್ಲಿ ಭಾಗವಹಿಸಿದ್ದಾ ವಿದ್ಯಾರ್ಥಿನಿಯರನ್ನು ಕಾಲೇಜು ವತಿಯಿಂದ ಅಭಿನಂದಿಸಲಾಯಿತು.
ಉಪನ್ಯಾಸಕರಾದ ಕೃಷ್ಣ, ಹೆಚ್.ಸಿ.ಜಗದೀಶ್, ಸುರುಚಿ, ಡಾ.ಕುಮಾರ್, ಸಿಬ್ಬಂದಿಗಳಾದ ಮಹೇಶ್(ಅಪಲೋ), ಗುಮಾಸ್ತ ಸೋಷಿಗೌಡ(ಶಶಿ) ಸೇರಿದಂತೆ ಉಪನ್ಯಾಸಕ ವೃಂದ ಇದ್ದರು.