Thursday, May 22, 2025
Google search engine

Homeಅಪರಾಧಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕೆ.ಎಸ್. ಈಶ್ವರಪ್ಪ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ ಇದು ಹೀಗೆ ಮುಂದುವರೆದರೆ  ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular