ಮಂಗಳೂರು (ದಕ್ಷಿಣ ಕನ್ನಡ) ಪೂರ್ವ ತಯಾರಿ ಮಾಡದೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಘೋಷಿಸಲಾಗಿದ್ದು ಇದನ್ನು ಕೂಡಲೇ ತಡೆಹಿಡಿಯಬೇಕು ಎಂದು ಚುನಾವಣಾ ಆಯೋಗವನ್ನು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ ಮಾಡಿದೆ.
ಈ ಕುರಿತು ಇಂದು ಕಡಬದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಮಾತನಾಡಿದರು.