ವರದಿ :ಸ್ಟೀಫನ್ ಜೇಮ್ಸ್.
ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ…
ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್, ‘ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ. ನಿಯಮಗಳು ಅನೇಕ ಶಾಲೆಗಳು ಜಾರಿ ಮಾಡಿಲ್ಲ. ಸರ್ಕಾರದ ನಿಯಮ ಖಾಸಗಿ ಶಾಲೆಗಳು ಉಲ್ಲಂಘನೆ ಮಾಡಲಾಗಿದೆ.
ಶಿಕ್ಷಣ ಇಲಾಖೆ ಕೇವಲ ನೊಟೀಸ್ ಕೊಡಲಾಗಿದೆ. ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. RTE ಅಡಿ ಎರಡು ವರ್ಷಗಳಲ್ಲಿ ದಾಖಲಾತಿ ಕಡಿಮೆ ಆಗಿದೆ. ಖಾಸಗಿ ಶಾಲೆಗಳಲ್ಲಿ 25% ಸೀಟು ಕೊಡಬೇಕು. ಈ ಶಾಲೆಗೆ ಸರ್ಕಾರವೇ ಹಣ ಕೊಡಲಿದೆ. ಕಳೆದ 2 ವರ್ಷಗಳಲ್ಲಿ ದಾಖಲಾತಿ ಯಾಕೆ ಕಡಿಮೆ ಆಯ್ತು ಎಂದು ಅವರು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ‘ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.



