ಬೆಂಗಳೂರು : ಚಂದನವನದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಚಿತ್ರ ದೇಶಾದ್ಯಂತ ಭರ್ಜರಿ ಪ್ರದರ್ಶನದ ಮೂಲಕ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಿದ್ದು, ಇದೀಗ ಐತಿಹಾಸಿಕ ದಾಖಲೆಗೆ ಪಾತ್ರವಾಗಿದ್ದು, ಈಗಾಗಲೇ ಹಲವು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ, ಇದೀಗ ಇಂಗ್ಲಿಷ್ ಭಾಷೆಯಲ್ಲೂ ತೆರೆಕಾಣಲು ಸಿದ್ಧವಾಗಿದೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಮೂರು ವಾರಗಳ ಹಿಂದೆ ರಿಲೀಸ್ ಆಗಿರುವ ಕಾಂತಾರ ಚಾಪ್ಟರ್ 1 ದೇಶ-ವಿದೇಶಗಳಲ್ಲಿ ಉತ್ತಮ ಪ್ರತಿಕ್ರಿಯೆ ಲಭಿಸಿದೆ.
ಬಾಕ್ಸಾಫೀಸ್ ನಲ್ಲಿ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಈಗಾಗಲೇ ಚಿತ್ರವು ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 800 ಕೋಟಿ ಗೂ ಅಧಿಕ ಗಳಿಕೆ ಕಂಡಿದೆ. ಕನ್ನಡದಲ್ಲಿ ಕೆಜಿಎಫ್ 2 ದಾಖಲೆಯನ್ನೂ ಮುರಿದಿದೆ.ಇನ್ನು ಸಿನಿಮಾ ಬಿಡುಗಡೆಯಾಗಿ 21ನೇ ದಿನಕ್ಕೆ ಕಾಲಿಟ್ಟಿರುವ ಈ ಸಿನಿಮಾ ಇನ್ನು ಹೊಸ ಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಲೇ ಇದೆ. ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಹೊಸ ಸಾಹಸಕ್ಕೆ ಕೈ ಹಾಕಿದೆ.
ಈಗಾಗಲೇ ಹಲವು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ, ಇದೀಗ ಇಂಗ್ಲಿಷ್ ಭಾಷೆಯಲ್ಲೂ ತೆರೆಕಾಣಲು ಸಿದ್ಧವಾಗಿದೆ. ಇಂಗ್ಲಿಷ್ ಗೆ ಡಬ್ ಮಾಡಿ ವಿಶ್ವದಾದ್ಯಂತ ರಿಲೀಸ್ ಮಾಡುವುದಕ್ಕೆ ಹೊಂಬಾಳೆ ಫಿಲ್ಮ್ಸ್ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶೀಘ್ರದಲ್ಲೇ ಕನ್ನಡ ಸಿನಿಮಾ ಗ್ಲೋಬಲ್ ಲೆವೆಲ್ನಲ್ಲಿ ಸದ್ದು ಮಾಡಲಿದೆ.
ಇದೇ ಅ.31ಕ್ಕೆ ಕಾಂತಾರ ಚಾಪ್ಟರ್ 1 ಚಿತ್ರದ ಇಂಗ್ಲಿಷ್ ಅವತರಣಿಕೆಯ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೀಗಾಗಿ ಚಿತ್ರತಂಡ ಜಾಗತಿಕ ಮಟ್ಟದಲ್ಲಿ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ.



