ಚಾಮರಾಜನಗರ : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಸಿಲಿಂಡರ್ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ವಾಣಿಜ್ಯ ಗ್ಯಾಸ್ ದರವನ್ನು 993 ರೂ. ಹೆಚ್ಚಳ ಮಾಡಿದ್ದು, ಪದೇಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಅತ್ಯಂತ ಖಂಡನೀಯವಾದದ್ದು, ಕೂಡಲೇ ದರ ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರ ವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಕಂಡಕ್ಟರ್ ಚಾ.ಸಿ.ಸೋಮನಾಯಕ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಚಾ.ವೆಂ.ರಾಜ್ ಗೋಪಾಲ್, ಆಟೋ ಲಿಂಗರಾಜು, ಅಮಚವಾಡಿ ರಾಜು, ರಾಚಪ್ಪ, ಮುತ್ತಿಗೆ ಗೋವಿಂದರಾಜು, ಹೊಮ್ಮ ಲೋಕೇಶ್, ಮಂಗಲ ಹೊಸೂರು ಶಿವಣ್ಣ, ನಂಜುಂಡಿ, ನಾಗರಾಜಶೆಟ್ಟಿ, ನಂಜುಂಡಶೆಟ್ಟಿ, ಆಟೋ ಸುರೇಶ್, ಚಂದ್ರು ಇತರರು ಭಾಗವಹಿಸಿದ್ದರು.



