Thursday, May 22, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ರಾಜ್ಯ ಪಂಚಾಯತ್ ಪರಿಷತ್ ೨೦೨೨ - ೨೩ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ

ಕರ್ನಾಟಕ ರಾಜ್ಯ ಪಂಚಾಯತ್ ಪರಿಷತ್ ೨೦೨೨ – ೨೩ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ

ಎಡತೊರೆ ಮಹೇಶ್
ಬೆಂಗಳೂರು: ಕರ್ನಾಟಕ ರಾಜ್ಯ ಪಂಚಾಯತ್ ಪರಿಷತ್ನ ೨೦೨೨ ಮತ್ತು ೨೩ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯು ಬೆಂಗಳೂರಿನ ಗಾಂಧಿ ಭವನದ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆ ಅಧ್ಯಕ್ಷತೆಯನ್ನು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಕಾರ್ಯಾಧ್ಯಕ್ಷರು ಹಾಗೂ ಹಾಲಿ ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಶ್ರೀ ಸಿ ನಾರಾಯಣ ಸ್ವಾಮಿ ರವರು ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪಂಚಾಯತ್ ಪುರುಷೋತ್ತಮ ಹಿರಿಯ ಸದಸ್ಯರಾದ ಡಿ ಆರ್ ಪಾಟೀಲ್ ರವರು , ವಿ ವೈ ಘೋರ್ಪಡೆ ಯವರು, ಕೋಶಾಧಿಕಾರಿಗಳಾದ ಚಿಕ್ಕಕೊಮ್ಮಾರಿ ಗೌಡ, ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ನವೀನ್ ಕೆರಹಳ್ಳಿ , ಮೈಸೂರು ಜಿಲ್ಲಾ ಪಂಚಾಯತ್ನ ಮಾಜಿ ಅಧ್ಯಕ್ಷ ಪುಷ್ಪ ಅಮರನಾಥ್ , ಮಾದಿ ಜಿಲ್ಲಾ ಪಂಚಾಯತ್ ಸದಸ್ಯ ವಿ ಎಸ್ ಪಾಟೀಲ್ , ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನೀಲಕಂಠಗೌಡ ಉಪಸ್ಥಿತರಿದ್ದರು.

ಪ್ರಸ್ತಾವಿಕವಾಗಿ ಮಾತನಾಡಿದ ಸಿ ನಾರಾಯಣಸ್ವಾಮಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಸಬಲೀಕರಣದ ಉದ್ದೇಶದಿಂದ ಸ್ಥಾಪಿತವಾಗಿರುವ ಕರ್ನಾಟಕ ಪಂಚಾಯತ್ ಪರಿಷತ್ ಪಂಚಾಯತ್ ರಾಜ್ ವ್ಯವಸ್ಥೆಯ ಬೆಳವಣಿಗೆಯ ಪೂರಕವಾಗಿ ನಿರಂತರ ಪ್ರಯತ್ನವನ್ನು ಮಾಡುತ್ತಾ ಬಂದಿದೆ. ಪ್ರಸಕ್ತ ವರ್ಷ ಪರಿಷತ್ನ ವತಿಯಿಂದ ಕಾರ್ಯಗಾರಗಳನ್ನು ನಡೆಸುತ್ತ ವಿಕೇಂದ್ರಿಕೃತ ಯೋಜನ ತಯಾರಿಸಲು ಪೂರಕವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂಬ ಮಾಹಿತಿಯನ್ನು ನೀಡಿದರು.

ನಂತರ ೨೨ ಮತ್ತು ೨೩ ನೇ ಸಾಲಿನ ಆಯ ವ್ಯಯ ವನ್ನು ಮಂಡಿಸಿ ಒಪ್ಪಿಗೆ ಪಡೆಯಲಾಯಿತು. ನಂತರ ಸರ್ವ ಸದಸ್ಯರನ್ನು ಉದ್ದೇಶಿ ಮಾತನಾಡಿದ ಪರಿಷತ್ನ ಪ್ರಧಾನ ಕಾರ್ಯದರ್ಶಿ ಕಾಡಶೆಟ್ಟಿಹಳ್ಳಿ ಸತೀಶ್ ರವರು ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯ ಸಬಲೀಕರಣಕ್ಕೆ ಪೂರಕವಾಗಿ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳನ್ನು ಮತ್ತು ಚಟುವಟಿಕೆಗಳ ಕುರಿತು ಸರ್ವ ಸದಸ್ಯರಿಗೆ ಮಾಹಿತಿಯನ್ನು ನೀಡಿ ದರು, ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಮೈಸೂರ್ ನಾಗರಾಜ್ ಎಡತೊರೆ ಮಹೇಶ್ ಹುಣಸೂರು ರಾಜು ರಾಜ್ಯದ ವಿವಿಧ ಜಿಲ್ಲೆಗಳಿಂದ ಪಂಚಾಯತ್ ರಾಜ್ ಪರಿಷತ್ತಿನ ಸದಸ್ಯರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular