Sunday, August 10, 2025
Google search engine

Homeಸ್ಥಳೀಯಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್‌ ನಾಯಕ

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್‌ ನಾಯಕ

ಮೈಸೂರು, ಆಗಸ್ಟ್ 9, 2025: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್‌ಆರ್ ಗ್ರೂಪ್ ಅಧೀನದ ಮೈಸೂರು ವಾರಿಯರ್ಸ್‌ ಕ್ರಿಕೆಟ್ ತಂಡವು ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ 20 ಕ್ರಿಕೆಟ್ ಆಟಗಾರರ ತನ್ನ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ ಕರುಣ್ ನಾಯರ್‌ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಕರುಣ್ ನಾಯರ್ ಗಾಯಾಳುವಾಗಿರುವದರಿಂದ, ಪ್ರಾರಂಭದ ಕೆಲವು ಮ್ಯಾಚ್ ಗಳಲ್ಲಿ ಹಂಗಾಮಿ ನಾಯಕನಾಗಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ.

ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರಾಗಿರುವ ಕರುಣ್ ನಾಯರ್ ಅವರು ಮೈಸೂರು ವಾರಿಯರ್ಸ್‌ ತಂಡವನ್ನು ಈ ಬಾರಿಯೂ ಗೆಲುವಿನೆಡೆಗೆ ಕರೆದೊಯ್ಯುವ ನಿರೀಕ್ಷೆ ಹೊಂದಲಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿರುವ ಮತ್ತು ಟಿ20 ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಕರುಣ್‌ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಲಿದ್ದಾರೆ.

ವಿಶೇಷವೆಂದರೆ ಮಹಾರಾಜ ಟ್ರೋಫಿ 2025 ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಖ್ಯಾತ ಕ್ರಿಕೆಟಿಗರಾದ ಪ್ರಸಿದ್ಧ್ ಎಂ ಕೃಷ್ಣ, ಮನೀಷ್ ಪಾಂಡೆ ಮತ್ತು ಗೌತಮ್ ಕೆ ಅವರು ಆಡಲಿದ್ದಾರೆ. ಮಹಾರಾಜ ಟ್ರೋಫಿ ಪಂದ್ಯಾವಳಿಯು ಆಗಸ್ಟ್ 11 ರಿಂದ 27ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದ್ದು, ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಪರಸ್ಪರ ಸೆಣೆಸಲಿವೆ.

ಕ್ರೀಡೆಯ ಮೂಲಕ ಸಮಾಜಕ್ಕೂ ಒಳಿತು ಮಾಡಬೇಕು ಎಂದು ನಂಬಿರುವ ಮೈಸೂರು ವಾರಿಯರ್ಸ್ ತಂಡವು ಇದೀಗ ದಕ್ಷಿಣ ಏಷ್ಯಾದ ಮೊದಲ ವೀಲ್‌ಚೇರ್ ಕ್ರಿಕೆಟ್ ಲೀಗ್ ಆಗಿರುವ ಎಬಿಲಿಟಿ ಸ್ಪೋರ್ಟ್ಸ್ ಲೀಗ್ (ಎಎಸ್ಎಲ್) ಟಿ20 ಜೊತೆಗೆ ಕಾಸ್ ಪಾರ್ಟನರ್‌ಶಿಪ್ ಮಾಡಿಕೊಂಡಿರುವುದಾಗಿ ಘೋಷಿಸಿದೆ. ಈ ಮೂಲಕ ವಿಕಲಚೇತನ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುವ ಎಎಸ್ಎಲ್ ಗೆ ಬೆಂಬಲ ಒದಗಿಸಲಿದೆ.

ಆ ಪ್ರಯುಕ್ತ ಕಳೆದ ವರ್ಷದಂತೆಯೇ ಈ ವರ್ಷವೂ ಎನ್‌ಆರ್ ಗ್ರೂಪ್ ಸಂಸ್ಥೆಯು ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಆಟಗಾರರು ತೆಗೆಯುವ ಪ್ರತೀ ವಿಕೆಟ್‌ಗೆ ₹2,000, ಹೊಡೆಯುವ ಪ್ರತೀ ಸಿಕ್ಸರ್‌ಗೆ ₹1,000 ಮತ್ತು ಪ್ರತಿ ಫೋರ್‌ಗೆ ₹500 ದೇಣಿಗೆ ನೀಡಲಿದೆ. ವಿಕಲಚೇತನ ಕ್ರೀಡಾಪಟುಗಳ ಸಬಲೀಕರಣಕ್ಕೆ ಈ ದೇಣಿಗೆ ಬಳಕೆಯಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಮೈಸೂರು ವಾರಿಯರ್ಸ್ ತಂಡದ ಮಾಲೀಕರು ಮತ್ತು ಸೈಕಲ್ ಪ್ಯೂರ್ ಅರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅರ್ಜುನ್ ರಂಗಾ ಅವರು, “ಕರುಣ್ ನಾಯರ್‌ ಅವರನ್ನು ನಮ್ಮ ತಂಡದ ನಾಯಕರನ್ನಾಗಿ ಘೋಷಿಸಲು ಸಂತೋಷ ಪಡುತ್ತೇವೆ. ಅವರ ಅನುಭವ ನಮ್ಮ ತಂಡಕ್ಕೆ ಆನೆಬಲ ನೀಡಲಿದೆ. ಅಲ್ಲದೇ ಈ ಸಲದ ಮಹಾರಾಜ ಟ್ರೋಫಿಯನ್ನು ಮೈಸೂರಿನಲ್ಲಿ ಆಯೋಜಿಸಲು ನಾವು ಉತ್ಸುಕರಾಗಿದ್ದೇವೆ. ಮೈಸೂರಿನಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ನಮ್ಮ ಫ್ರಾಂಚೈಸ್ ಗೆ ಮಹತ್ವದ ಕ್ಷಣವಾಗಿದ್ದು, ಈ ಸಲವೂ ಟ್ರೋಫಿಯನ್ನು ನಾವೇ ಗೆಲ್ಲುವ ನಂಬಿಕೆ ಇದೆ” ಎಂದರು.

ಮೈಸೂರು ವಾರಿಯರ್ಸ್ ತಂಡದ ಮುಖ್ಯ ಕೋಚ್ ಆಗಿರುವ ಶ್ರೀ ಆರ್‌ಎಕ್ಸ್ ಮುರಳಿ ಅವರು, “ನಮ್ಮ ತಂಡದ ಪ್ರತೀ ಆಟಗಾರರೂ ಹುಮ್ಮಸ್ಸಿನಿಂದ ಪ್ರದರ್ಶನ ನೀಡಲು ಕಾತರರಾಗಿದ್ದಾರೆ. ನಮ್ಮ ತಂಡದ ಅಭಿಮಾನಿಗಳಿಗಾಗಿ ನಾವು ಈ ಸಲವೂ ಅತ್ಯುತ್ತಮ ಪ್ರದರ್ಶನವನ್ನು ನೀಡಲಿದ್ದೇವೆ” ಎಂದರು.

ಮೈಸೂರು ವಾರಿಯರ್ಸ್ ತಂಡದ ನಾಯಕರಾದ ಶ್ರೀ ಕರುಣ್ ನಾಯರ್ ಅವರು, “ಮೈಸೂರು ವಾರಿಯರ್ಸ್‌ ತಂಡವನ್ನು ಮುನ್ನಡೆಸುವ ಅವಕಾಶ ಮತ್ತೊಮ್ಮೆ ಸಿಕ್ಕಿರುವುದಕ್ಕೆ ಆಭಾರಿಯಾಗಿದ್ದೇನೆ. ನಮ್ಮ ತಂಡವು ಹೊಸ ಪ್ರತಿಭೆಗಳು ಮತ್ತು ಅನುಭವಿ ಆಟಗಾರರ ಮಿಶ್ರಣವನ್ನು ಹೊಂದಿದೆ. ನಮ್ಮ ತಂಡವು ಅಭಿಮಾನಿಗಳಿಗಾಗಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ವಿಶ್ವಾಸ ನನಗಿದೆ” ಎಂದರು.

ಈ ಆವೃತ್ತಿಯ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‌ ತಂಡಕ್ಕೆ ಬ್ಯಾಟ್ ಬ್ರಿಕ್ಸ್7, ಕ್ಯಾಂಪಾ, ಸಂಕಲ್ಪ, 360 ಒನ್, ಸಿಂಪೋಲೊ, ಕೊನೆ ಮತ್ತು ಭಾರತ್ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ (ಬಿಐಟಿ) ಪ್ರಾಯೋಜಕತ್ವ ಒದಗಿಸಿವೆ.

RELATED ARTICLES
- Advertisment -
Google search engine

Most Popular