Wednesday, December 10, 2025
Google search engine

HomeUncategorizedಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 11 ರಂದು ಚುನಾವಣೆ ಮತ್ತು ಡಿಸೆಂಬರ್ 13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ.
     ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿದ್ದು, ಗಡಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಬಾರ್‍ಗಳನ್ನು ಡಿಸೆಂಬರ್ 9 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 11 ರ ಸಂಜೆ 6 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿಸೆಂಬರ್ 12 ರಂದು ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ: 13 ರ ಮಧ್ಯರಾತ್ರಿ 12 ಗಂಟೆಯ ತನಕ ಮುಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular