Tuesday, December 9, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿ ಮೃಗಾಲಯದ ಕೃಷ್ಣಮೃಗ ವಿಭಾಗಕ್ಕೆ ಖಂಡ್ರೆ ಭೇಟಿ: ವನ್ಯಮೃಗಗಳ ಬಗ್ಗೆ ಹೆಚ್ಚಿನ ಕಾಳಜಿಗೆ ಸೂಚನೆ.

ಬೆಳಗಾವಿ ಮೃಗಾಲಯದ ಕೃಷ್ಣಮೃಗ ವಿಭಾಗಕ್ಕೆ ಖಂಡ್ರೆ ಭೇಟಿ: ವನ್ಯಮೃಗಗಳ ಬಗ್ಗೆ ಹೆಚ್ಚಿನ ಕಾಳಜಿಗೆ ಸೂಚನೆ.

ವರದಿ :ಸ್ಟೀಫನ್ ಜೇಮ್ಸ್.

ಬೆಳಗಾವಿ, : ಗಳಲೆ ರೋಗದಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿದ ಭೂತರಾಮನಹಟ್ಟಿ, ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವನ್ಯಜೀವಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು

ಕೃಷ್ಣಮೃಗಗಳ ವಿಭಾಗಕ್ಕೆ ಭೇಟಿ ನೀಡಿ ಪಶುವೈದ್ಯರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೃಗಾಲಯದಲ್ಲಿರುವ ಎಲ್ಲ
ಪ್ರಾಣಿಗಳ ಆರೋಗ್ಯದ ಬಗ್ಗೆ ನಿಗಾ ಇಡಲು ಮತ್ತು ಲಸಿಕೆಗಳನ್ನು ನೀಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೀನಾಕ್ಷಿ ನೇಗಿ, ಪಿ.ಸಿ. ರೇ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular