Wednesday, December 17, 2025
Google search engine

Homeರಾಜ್ಯಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

ಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

ನವದೆಹಲಿ: ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಖರ್ಗೆ, ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಸೇಡಿನಿಂದ ನಡೆಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನಾಯಕತ್ವವನ್ನು ಗುರಿಯಾಗಿಸುವ ಪಕ್ಷಪಾತದ ಉದ್ದೇಶದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರೋಪ ಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ ಹಾಗೂ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಕೇಂದ್ರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಇನ್ನೂ ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ಈ ಪ್ರಕರಣ ಗಾಂಧಿ ಕುಟುಂಬಕ್ಕೆ ತೊಂದರೆ ಕೊಡಲು ಮಾತ್ರ. ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ಇಲ್ಲ. ನಮ್ಮ ಘೋಷಣೆ ಸತ್ಯಮೇವ ಜಯತೇ. ಪ್ರಕರಣದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಈ ಮೂಲಕ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular