ಮಡಿಕೇರಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಆ.೧೪ ಮತ್ತು ೧೫ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಇಂದು ಆ.೧೪ ರಂದು ಮಧ್ಯಾಹ್ನ ೧ ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ ೪.೩೦ ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಆ.೧೫ ರಂದು ಬೆಳಗ್ಗೆ ೯ ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯುವ ೭೮ ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.