Friday, May 23, 2025
Google search engine

Homeಅಪರಾಧಕೊಡಗು: ರೈಫಲ್​ ನಿಂದ ಗುಂಡು ಹಾರಿ ವ್ಯಕ್ತಿ ಸಾವು- ಮೂವರು ವಶಕ್ಕೆ

ಕೊಡಗು: ರೈಫಲ್​ ನಿಂದ ಗುಂಡು ಹಾರಿ ವ್ಯಕ್ತಿ ಸಾವು- ಮೂವರು ವಶಕ್ಕೆ

ಕೊಡಗು: ರೈಫಲ್​ ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ.

ಕುಶಾಲನಗರದ ಹಾರಂಗಿ ನಿವಾಸಿ ಸಂತೋಷ್ (34) ಮೃತ ದುರ್ದೈವಿ.

ಪಾಯಿಂಟ್​​ 22 ರೈಫಲ್​​ ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.

ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular