Saturday, June 28, 2025
Google search engine

Homeಅಪರಾಧಕೋಲ್ಕತ್ತಾ: ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಕಾಲೇಜಿನ ಭದ್ರತಾ ಸಿಬ್ಬಂದಿಯ ಬಂಧನ

ಕೋಲ್ಕತ್ತಾ: ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಕಾಲೇಜಿನ ಭದ್ರತಾ ಸಿಬ್ಬಂದಿಯ ಬಂಧನ

ಕೋಲ್ಕತ್ತಾ: ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಲೇಜಿನ ಭದ್ರತಾ ಸಿಬ್ಬಂದಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಾನೂನು ಕಾಲೇಜಿನ ಓರ್ವ ಮಾಜಿ ವಿದ್ಯಾರ್ಥಿ ಸೇರಿದಂತೆ ಮೂವರು ಆರೋಪಿಗಳಿಂದ ಅತ್ಯಾಚಾರಕ್ಕೀಡಾಗಿದ್ದ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಲೇಜು ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಕಾಲೇಜು ಆವರಣದಲ್ಲಿರುವ ಭದ್ರತಾ ಸಿಬ್ಬಂದಿಯ ಕೊಠಡಿಯಲ್ಲಿ ನಡೆದಿದ್ದ ಈ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿರುವ ಈ ಬಂಧನದೊಂದಿಗೆ ಈವರೆಗೆ ಬಂಧನಕ್ಕೀಡಾದ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಭದ್ರತಾ ಸಿಬ್ಬಂದಿಯ ಉತ್ತರಗಳು ಅಸಂಬದ್ಧವಾಗಿದ್ದುದರಿಂದ, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ. ಆತ ಕಾಲೇಜಿನ ಬಳಿ ಉಪಸ್ಥಿತನಿದ್ದದ್ದು ಕಾಲೇಜಿನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular