Wednesday, May 21, 2025
Google search engine

Homeಅಪರಾಧಕಾನೂನುಕೊಪ್ಪಳ: ಲೇಔಟ್ ​ಗೆ ಪರವಾನಗಿ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ​ಗೆ ಪರವಾನಗಿ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲೇಔಟ್ ​ಗೆ ಪರವಾನಗಿ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ  ಲೋಕಾಯುಕ್ತ ಪೊಲೀಸರ  ಬಲೆಗೆ ಬಿದ್ದಿದ್ದಾರೆ.

ಬಂಧಿತ ಅಧಿಕಾರಿಯನ್ನು ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ರಮೇಶ್ ಬಸವವಗೌಡ ಎಂದು ಗುರುತಿಸಲಾಗಿದೆ.

ರಮೇಶ್ ಇಲಾಖೆಯಲ್ಲಿ ಟೌನ್ ಪ್ಲ್ಯಾನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಲೇಔಟ್ ಪರವಾನಗಿ ನೀಡಲು ಎಂಟು ವ್ಯಕ್ತಿಯೊಬ್ಬರ ಬಳಿ ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು. ಖಾಸಗಿ ಸಹಾಯಕನ ಮೂಲಕ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರ ಮೂಲದ ರವಿಚಂದ್ರ ಅನ್ನೋರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ರವಿಚಂದ್ರ ಎಂಬವರಿಂದ ಮೂರು ಲಕ್ಷ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ರಮೇಶ್ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರಾಯಚೂರು ಲೋಕಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

RELATED ARTICLES
- Advertisment -
Google search engine

Most Popular