Wednesday, May 21, 2025
Google search engine

Homeಅಪರಾಧಕೆ.ಆರ್.ಪೇಟೆ: ಬ್ಯಾಂಕ್ ದರೋಡೆಗೆ ಬಂದವರನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ ಗೆ ಚಾಕು ಇರಿತ

ಕೆ.ಆರ್.ಪೇಟೆ: ಬ್ಯಾಂಕ್ ದರೋಡೆಗೆ ಬಂದವರನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ ಗೆ ಚಾಕು ಇರಿತ

ಕೆ.ಆರ್.ಪೇಟೆ: ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ  ಸೆಕ್ಯೂರಿಟಿ  ಗಾರ್ಡ್ ಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಭಾನುವಾರ ಮದ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ  ಕೆ.ಆರ್.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್  ಮನು(30) ಚಾಕು ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ಡಿಸಿಸಿ ಬ್ಯಾಂಕ್ ಹಾಗೂ ವಿ.ಎಸ್.ಎಸ್.ಎನ್. ನೌಕರ ಎಂದು ತಿಳಿದು ಬಂದಿದೆ.

ಘಟನೆ ವಿವರ:

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕು ದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಇದೆ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್  ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು  ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್ ಮನು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ, ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತು ಸ್ಥಳದಿಂದ ಪರಾರಿಯಾಗಿದ್ದಾರೆ.

ಚಾಕು ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ  ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಬ್ಯಾಂಕ್ ಅಧ್ಯಕ್ಷ  ಮೋಹನ್, ಸಿಇಓ ಕಾಂತರಾಜು,  ಮಾಜಿ ಅಧ್ಯಕ್ಷರಾದ ನಿಂಗರಾಜು, ಕೃಷ್ಣೇಗೌಡ,  ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಮತ್ತಿತರರು ಗಾಯಾಳು ಬೇಟಿ ಮಾಡಿ ಧೈರ್ಯ ತುಂಬಿದರು.

ನಂತರ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿ ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿ.ಎಸ್.ಎಸ್.ಎನ್  ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕು ಎಂದು ಮನವಿ‌ ಮಾಡಿದರು.

RELATED ARTICLES
- Advertisment -
Google search engine

Most Popular