ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.1ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಂದು ಆರಂಭಿಸಲು ಸಾಧ್ಯವಾಗಿಲ್ಲ. ಸೆ.1ರಂದು ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.