ಮದ್ದೂರು: ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದ ಕೆ ಟಿ ರಾಜಣ್ಣ ರವರು ಕಾಂಗ್ರೆಸ್ ಪಕ್ಷವನ್ನ ತೊರೆದು ಇಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಸ್ವಗೃಹ ಕಛೇರಿಯಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ರಾಜಣ್ಣ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ರವರು ಪ್ರಧಾನಿ ಆಗಬೇಕು ಭಾರತವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ಅವರಿಂದ ಮಾತ್ರ ಸಾಧ್ಯ ಹಾಗೂ ಲೋಕಸಭಾ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಬೇಕು ಎಂಬ ಆಸೆಯಿಂದ ನಾನು ಜೆಡಿಎಸ್ ಪಕ್ಷವನ್ನ ಸೇರುತ್ತಿರುವುದಾಗಿ ತಿಳಿಸಿದರು.

ಬಳಿಕ ಮಾತನಾಡಿದ ಮಾಜಿ ಸಚಿವಾ ಡಿಸಿ ತಮ್ಮಣ್ಣ ಕೇಟಿ ರಾಜಣ್ಣ ರವರ ಆಗಮನದಿಂದ ಜೆಡಿಎಸ್ ಪಕ್ಷಕ್ಕೆ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆನೆ ಬಲಬಂದಂತಾಗಿದೆ ಎಂದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.