Sunday, March 8, 2026
Google search engine

Homeರಾಜಕೀಯಸಿದ್ದರಾಮಯ್ಯ ಬಜೆಟ್‌ಗೆ ಕುಮಾರಸ್ವಾಮಿ ತೀವ್ರ ಟೀಕೆ : ಸಾಲದ ಹಣ ಎಲ್ಲಿಗೆ ಹೋಗುತ್ತಿದೆ? ಕುಮಾರಸ್ವಾಮಿ ಪ್ರಶ್ನೆ

ಸಿದ್ದರಾಮಯ್ಯ ಬಜೆಟ್‌ಗೆ ಕುಮಾರಸ್ವಾಮಿ ತೀವ್ರ ಟೀಕೆ : ಸಾಲದ ಹಣ ಎಲ್ಲಿಗೆ ಹೋಗುತ್ತಿದೆ? ಕುಮಾರಸ್ವಾಮಿ ಪ್ರಶ್ನೆ

ಹುಣಸೂರು : ನಿನ್ನೆ ಹುಣಸೂರಿನ ಧಾರ್ಮಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ದ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸಂಪುಟದ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ ಎಂದು ವಿನಂತಿ ಮಾಡಿಕೊಂಡ ಪ್ರಸಂಗ ನಡೆಯಿತು.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮಠಾಧೀಶರು ಪಾಲ್ಗೊಂಡಿದ್ದರು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ಕುಮಾರಸ್ವಾಮಿ ತೀವ್ರ ಅಸಮಾಧಾನವನ್ನು ವ್ಯಕ್ತ ಪಡಿಸಿದರು. ಸರ್ಕಾರದ ಅಂಕಿಅಂಶಗಳನ್ನು ಬಜೆಟ್ ಪ್ರತಿಯಲ್ಲಿ ಮುದ್ರಿಸಿದರೆ ಅದರಿಂದ ಏನು ಪ್ರಯೋಜನ .ನಾನು ಈ ವಿಷಯದಲ್ಲಿ ರಾಜಕೀಯವನ್ನು ಮಾಡುತ್ತಿಲ್ಲ. ಸರ್ಕಾರದಲ್ಲಿರುವವರು ಜನರ ಆಶೋತ್ತರಗಳನ್ನು ಈಡೇರಿಸುವುದು ಕರ್ತವ್ಯವಲ್ಲವೇ? ಇದೇ ರೀತಿಯಲ್ಲಿ ಸರ್ಕಾರ ನಡೆಸುತ್ತಾ ಬಂದರೆ, ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಕರಾಳ ದಿನ ಎದುರಾಗಲಿದೆ ಎನ್ನುವುದನ್ನು ನಾವು ಮರೆಯಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ವೇದಿಕೆಯಲ್ಲಿದ್ದರು.

ನನ್ನ ಸಹೋದರಿ ಲಕ್ಷ್ಮೀ ಹೆಬ್ಬಾಳ್ಕರ್ ಇಲ್ಲೇ ವೇದಿಕೆಯಲ್ಲಿ ಕೂತಿದ್ದಾರೆ, ಅವರಿಗೊಂದು ಮಾತನ್ನು ಹೇಳಲು ಬಯಸುತ್ತೇನೆ. ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ಪ್ರತೀ ತಿಂಗಳು ಎರಡು ಸಾವಿರ ರೂಪಾಯಿ ಗೃಹಲಕ್ಷ್ಮೀ ನೀಡುತ್ತಿದ್ದೀರಿ. ಇದಕ್ಕೆ ನನ್ನ ತಕರಾರು ಏನೂ ಇಲ್ಲ, ನನ್ನ ವಿರೋಧವೂ ಇಲ್ಲ. ಮೂರು ವರ್ಷಗಳಿಂದ, ಎಪ್ಪತ್ತರಿಂದ ಎಪ್ಪತ್ತೈದು ಸಾವಿರ ಕೋಟಿ ರೂಪಾಯಿ ನೀಡಿರಬಹುದು. ಆದರೆ, ಇದಕ್ಕೆ ಹಣ ಎಲ್ಲಿಂದ ಹೊಂದಿಸುತ್ತಿದ್ದೀರಿ ನಿಮ್ಮ ಮುಖ್ಯಮಂತ್ರಿಗಳಿಗೆ ತಿಳುವಳಿಕೆಯನ್ನು ಹೇಳಿ ಎಂದು ಕುಮಾರಸ್ವಾಮಿ ಎಂದು ಮನವಿ ಮಾಡಿದ್ದಾರೆ.

ಬಂಡವಾಳ ಹೂಡಿಕೆಯಾಗುತ್ತಿಲ್ಲ, ಸರ್ಕಾರಿ ಆಸ್ತಿಗಳು ನಿರ್ಮಾಣಗೊಳ್ಳುತ್ತಿಲ್ಲ, ಆದರೂ ಸಾಲ, ಹಾಗಾದರೆ, ಸಾಲದ ಹಣವೆಲ್ಲಾ ಎಲ್ಲಿಗೆ ಹೋಗುತ್ತಿದೆ? ರಾಜ್ಯದ ಸಾಲ ಈಗ 8.24 ಲಕ್ಷ ಕೋಟಿ ರೂಪಾಯಿ ಬಂದು ನಿಂತಿದೆ. ಸಿಎಂಗೆ ತಿಳುವಳಿಕೆ ಹೇಳದೇ ಇದ್ದಲ್ಲಿ, ರಾಜ್ಯದ ಪರಿಸ್ಥಿತಿ ದಯನೀಯ ಸ್ಥಿತಿಗೆ ಹೋಗಲಿದೆ ಎಂದರು.

ನಾನು ಕೂಡಾ ಎರಡು ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದೆ, ನಾನು ಸಾಲಮನ್ನಾ ಮಾಡಿದ್ದೆ. ಸರ್ಕಾರದ ಬೊಕ್ಕಸದಲ್ಲಿ ಹಣವೇ ಇಲ್ಲ, ಸಾಲ ಹೇಗೆ ಮನ್ನಾ ಮಾಡುತ್ತೀರಿ ಎಂದು ಹಲವರು ಕುಹುಕ ಆಡಿದರು. ಆದರೆ, ಎಲ್ಲೂ ಸಾಲ ಮಾಡದೇ ಸಾಲಮನ್ನಾ ಮಾಡಿದ್ದೆ, ಮಾಡಿ ತೋರಿಸಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular