Sunday, September 7, 2025
Google search engine

Homeರಾಜ್ಯಸುದ್ದಿಜಾಲಸಸಿ ನೆಡುವ ಮೂಲಕ ಉದ್ಯಾನವನ ನಿರ್ಮಾಣಕ್ಕೆ ಚಾಲನೆ

ಸಸಿ ನೆಡುವ ಮೂಲಕ ಉದ್ಯಾನವನ ನಿರ್ಮಾಣಕ್ಕೆ ಚಾಲನೆ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಶ್ರೀಮಂಟಿಯಮ್ಮ ದೇವಸ್ಥಾನ ಆವರಣದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಎಲ್ಲರ ಅನುಕೂಲಕ್ಕಾಗಿ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಮಾಜಿ ಶಾಸಕ ಕೆ.ಮಹದೇವ್ ಮಾತನಾಡಿ ಉದ್ಯಾನವನಗಳ ನಿರ್ಮಾಣದಿಂದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗುತ್ತದೆ. ಬೆಟ್ಟದಪುರ ಗ್ರಾಮದಲ್ಲಿ ಹಿರಿಯ ನಾಗರಿಕರು ಸೇರಿದಂತೆ ಪ್ರತಿಯೊಬ್ಬರಿಗೂ ಉಪಯುಕ್ತವಾಗಲು ಉದ್ಯಾನವನ ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಷಯ ಎಂದರು.

ರೈತ ಸಂಘದ ರಾಜ್ಯಾಧ್ಯಕ್ಷ ಆನಂದಗೆರೆ ಮಂಜುನಾಥ್ ಗೌಡ ಮಾತನಾಡಿ ಬೆಟ್ಟದಪುರದಲ್ಲಿ ಸುಮಾರು 11ಗುಂಟೆ ಜಾಗದಲ್ಲಿ ಗ್ರಾಮದ ಹಿರಿಯ ನಾಗರೀಕರು ಮತ್ತು ಎಲ್ಲಾ ಸಮುದಾಯದ ಅನುಕೂಲಕ್ಕಾಗಿ ಉದ್ಯಾನವನ (ಪಾರ್ಕ್) ನಿರ್ಮಾಣವಾಗುತ್ತಿದೆ. ಕಾರ್ಯಕ್ರಮಕ್ಕೆ ನಮ್ಮ ರೈತ ಸಂಘದಿಂದ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಲಾಗಿದೆ. ಇದರಿಂದ ಸ್ಥಳೀಯವಾಗಿ ಉತ್ತಮ ಪರಿಸರದ ವಾತಾವರಣ ನಿರ್ಮಾಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ಮಹದೇವ್, ರೈತ ಪಿತಾಮಹ ಹನೂರು ಪ್ರಕಾಶ್ ಸೇರಿದಂತೆ ಎಲ್ಲಾ ರೈತ ಸಂಘದ ಪದಾಧಿಕಾರಿಗಳು ಮತ್ತು ಬೆಟ್ಟದಪುರ ಗ್ರಾಮಸ್ಥರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು.

RELATED ARTICLES
- Advertisment -
Google search engine

Most Popular