ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರ ಏಜೆಂಟ್ ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಖಂಡಿಸಿದ್ದಾರೆ. ಅವರು ಶುಕ್ರವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದರು. ವಿಪಕ್ಷ ನಾಯಕ ಅಶೋಕ್ ಅವರ ಹೇಳಿಕೆ ತಿಳಿಗೇಡಿತನದ್ದು, ಅವರು ಆಗಾಗ ಪ್ರಬುದ್ದತೆ ಇಲ್ಲದ ಬಾಲಿಶ ಹೇಳಿಕೆಯನ್ನು ನೀಡುತ್ತಿದ್ದಾರೆ. ಕೆಸಿ ವೇಣುಗೋಪಾಲ್ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಅವರ ಬಗ್ಗೆ ಅಶೋಕ್ ಇಂತಹ ಟೀಕೆ ಮಾಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಅಶೋಕ್ ಅವರಿಗೆ ನೈತಿಕತೆ ಇಲ್ಲ. ಬಿಜೆಪಿ ಪಕ್ಷದಲ್ಲಿ ಏನಾಗುತ್ತದೆ ಎನ್ನುವುದು ಅವರಿಗೆ ಗೊತ್ತಿಲ್ಲ. ಮೊದಲು ಅಶೋಕ್ ತಮ್ಮ ಪಕ್ಷದ ಬಗ್ಗೆ ತಿಳಿದುಕೊಳ್ಳಲಿ. ಅಶೋಕರಿಗೆ ನೈತಿಕತೆ ಇಲ್ಲ. ಅವರು ಅವರ ಪಕ್ಷದಲ್ಲಿ ಏನಾಗುತ್ತದೆ ಎನ್ನುವುದನ್ನು ಮೊದಲು ತಿಳಿದುಕೊಳ್ಳಲಿ, ಆನಂತರ ಬೇರೆ ಪಕ್ಷಗಳ ನಾಯಕರ ಬಗ್ಗೆ ಮಾತನಾಡಲಿ ಎಂದರು.
ಅಶೋಕ್ ಹಿಂದೆ ಸಾರಿಗೆ ಸಚಿವರಾಗಿದ್ದಾಗ ಮಾಡಿದ್ದೇನು? ಮಂಗಳೂರಿನ ಕೆಎಸ್ ಆರ್ ಟಿಸಿ ಜಮೀನನ್ನು ಖಾಸಗಿ ಯವರಿಗೆ ಮಾರಾಟ ಮಾರಾಟ ಮಾಡಲಾಗಿತ್ತು. ಇಂತಹ ಹಲವು ಪ್ರಕರಣಗಳು ರಾಜ್ಯದ ಹಲವಡೆ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.
ವಿಪಕ್ಷ ನಾಯಕ ಅಶೋಕ್ ಗೆ ಪ್ರಬುದ್ಧತೆ ಇಲ್ಲ; ಮಾಜಿ ಸಚಿವ ಬಿ.ರಮಾನಾಥ ರೈ ಕಿಡಿ
RELATED ARTICLES



