Saturday, February 7, 2026
Google search engine

Homeರಾಜ್ಯಸುದ್ದಿಜಾಲಗ್ರಾಮೀಣ ಮಕ್ಕಳೂ ರಾಷ್ಟ್ರಮಟ್ಟದಲ್ಲಿ ಮಿಂಚಲಿ: ಸಚಿವ ಸತೀಶ ಜಾರಕಿಹೊಳಿ.

ಗ್ರಾಮೀಣ ಮಕ್ಕಳೂ ರಾಷ್ಟ್ರಮಟ್ಟದಲ್ಲಿ ಮಿಂಚಲಿ: ಸಚಿವ ಸತೀಶ ಜಾರಕಿಹೊಳಿ.

ವರದಿ ಸ್ಟೀಫನ್ ಜೇಮ್ಸ್.

ಬೆಳಗಾವಿ: ‘ಕ್ರಿಕೆಟ್‌ನಲ್ಲಿ ಈಗ ಸಾಕಷ್ಟು ಅವಕಾಶಗಳುಸೃಷ್ಟಿಯಾಗುತ್ತಿವೆ. ಅದಕ್ಕೆ ತಕ್ಕಂತೆ ಮಕ್ಕಳಿಗೆ ತರಬೇತಿ ಕೊಡಿಸುವುದು ಅಗತ್ಯ. ಇದರಿಂದ ಗ್ರಾಮೀಣ ಮಕ್ಕಳೂ ರಾಷ್ಟ್ರಮಟ್ಟದಲ್ಲಿ ಮಿಂಚಬಲ್ಲರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜವಾಹರ ಬಾಲಭವನ ಸೊಸೈಟಿ, ಜಿಲ್ಲಾ ಬಾಲ ಭವನ ಸಮಿತಿ ಆಶ್ರಯದಲ್ಲಿ ಶುಕ್ರವಾರ, ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ‘ಬಾಲ ಭವನದಿಂದ ಬೆಳಗಾವಿಯಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಾಕ್ಸ್ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗಿದೆ’ ಎಂದರು.’ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಆಸಕ್ತಿ ವಹಿಸಿ ಈ ಯೋಜನೆ ರೂಪಿಸಿದ್ದಾರೆ. ಬಾಲಭವನದಿಂದ, ಜಿಲ್ಲಾ ಪಂಚಾಯಿತಿಯಿಂದ ಹಾಗೂ ಶಾಸಕ ಆಸೀಫ್ ಸೇರ್ ಅವರ ಶಾಸಕರ ಅನುದಾನದಿಂದ ಹಣ ಭರಿಸಲಾಗಿದೆ’ ಎಂದರುಮಾಧ್ಯಮಗೋಷ್ಠಿ: ನಂತರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಲಕ್ಷ್ಮೀ ಹೆಬ್ಬಾಳಕರ, ‘ಬಡಾಲ ಅಂಕಲಗಿ ಕೌರಿಗುಡ್ಡದಲ್ಲಿ ಕೇಂದ್ರ ಸರ್ಕಾರದಿಂದ ಸೌರ ಘಟಕ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಲಾಗಿದೆ. ಸರ್ಕಾರಿ ಜಾಗದಲ್ಲಿ ಸರ್ಕಾರಿ ಯೋಜನೆ ರೂಪುಗೊಳ್ಳುತ್ತಿದೆ. ಇದರಲ್ಲಿ ರಾಜಕೀಯ ಏನು ಬಂತು? ಅನುಮತಿ ಇಲ್ಲದೇ ಮರ ಕಡಿದಿದ್ದರೆ ಅಂಥವರ ವಿರುದ್ಧ ಕ್ರಮಕ್ಕೆ ಎಫ್‌ಐಆ‌ರ್ ಮಾಡಲಾಗಿದೆ’ ಎಂದರು.’ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಟ್ರೊ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು ಕಳವಳಕಾರಿ. ಈ ಅನಿಷ್ಠ ಪದ್ಧತಿಗಳನ್ನು ಬೇರು ಮಟ್ಟದಿಂದ ಕಿತ್ತುಹಾಕಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ, ಸಾರ್ವಜನಿಕರ ಸಹಕಾರ ಅಗತ್ಯ’ ಎಂದರು.ಶಾಸಕ ಆಸೀಫ್ ಸೇರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾ‌ರ್, ಮಹಿಳಾ ಅಭಿವೃದ್ಧಿ ಅಧಿಕಾರಿ ಕಾಂಚನ ಅಮಟೆ, ಸಿಡಿಪಿಒಗಳಾದ ರಾಮಮೂರ್ತಿ ಕೆ.ವಿ, ಸುಮಿತ್ರಾ, ಆನಂದ ಅಕಾಡೆಮಿಯ ಆನಂದ ಕರಡಿ ಹಲವರು ಇದ್ದರು.

RELATED ARTICLES
- Advertisment -
Google search engine

Most Popular