ಬೆಂಗಳೂರು: ಸಮಾಜಕ್ಕೆ ಮಾರಕವಾದ ಡ್ರಗ್ಸ್ ಜಾಲವನ್ನು ನಿರ್ಮೂಲನೆ ಮಾಡಬೇಕಾದ ಪೋಲೀಸರೇ ಡ್ರಗ್ ಪೆಡ್ಲರ್ ಗಳ ಜೊತೆ ನೇರ ಸಂಪರ್ಕ ಹೊಂದಿದ್ದು, ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಚಾಮರಾಜಪೇಟೆ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು 10 ಮಂದಿ ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
10 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದ್ದು, ಈ ಪೈಕಿ ಚಾಮರಾಜಪೇಟೆಯ 6 ಮಂದಿ ಪೊಲೀಸರು ಮತ್ತು ಜೆ.ಜೆ.ನಗರದ 4 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು ಚಾಮರಾಜಪೇಟೆ ಠಾಣೆ ಇನ್ಸ್ ಪೆಕ್ಟರ್ ಮಂಜಣ್ಣ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದರೆ.ಇನ್ನುಳಿದ ಸಿಬ್ಬಂದಿಗಳನ್ನು ಡಿಸಿಪಿ ಗಿರೀಶ್ ಅವರು ಅಮಾನತುಗೊಳಿಸಿದ್ದಾರೆ.
ಈಗಾಗಲೇ ಪೋಲಿಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದ್ದು, ಹೆಡ್ ಕಾನ್ಸ್ಟೇಬಲ್ ರಮೇಶ್, ಶಿವರಾಜ್ ಮತ್ತು ಕಾನ್ಸ್ ಸ್ಟೇಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್, ಆನಂದ್ ಹಾಗೂ ಜೆ.ಜೆ. ನಗರ ಪೊಲೀಸ್ ಠಾಣೆಯ ಎಎಸ್‌ಐ ಕುಮಾರ್, ಹೆಡ್ ಕಾನ್ಸ್ ಸ್ಟೇಬಲ್ ಆನಂದ್, ಸಿಬ್ಬಂದಿ ಬಸವಗೌಡ ಸೇರಿ ಹತ್ತು ಮಂದಿಯನ್ನು ಅಮಾನತು ಮಾಡಲಾಗಿದೆ.