ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨.೭೫ ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.
ಕರ್ನಾಟಕದಲ್ಲಿ ಮಾರ್ಚ್ ೧೬ ರಿಂದ ಇಂದಿನವರೆಗೆ ಒಟ್ಟು ೯.೬೪ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.
ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬಂದ ನಂತರ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಕರ್ನಾಟಕದ ೨೮ ಕ್ಷೇತ್ರಗಳಿಗೆ ಏಪ್ರಿಲ್ ೨೬ ಮತ್ತು ಮೇ ೭ ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.