ಗುಲ್ಬರ್ಗ : ಲೋಕಸಭೆ ಪ.ಜಾ. ಕಲಬುರಗಿ: ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಎರಡನೇ ದಿನವಾದ ಸೋಮವಾರ ನಾಲ್ವರು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆಯಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನಮ್ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ 1 ನಾಮಪತ್ರ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಶರಣಬಸಪ್ಪ ಮಲ್ಲಿಕಾಜಪ್ಪ 2 ನಾಮಪತ್ರ ಸಲ್ಲಿಸಿದರು. ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ. ಇದುವರೆಗೆ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.