ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 08 ರಂದು ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಬೇಕಿದ್ದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕಾರ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಅಕ್ಟೋಬರ್, 10 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.