ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತುಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜೇಗೌಡರ ನಿವಾಸ ಬಸಾಪುರದ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.