Saturday, May 24, 2025
Google search engine

HomeUncategorizedರಾಷ್ಟ್ರೀಯಹಸುಗಳನ್ನು ತುಂಬಿದ್ದ ಲಾರಿ ಪಲ್ಟಿ: ಚಾಲಕ, ಕ್ಲೀನರ್, 40 ಹಸುಗಳು ಸಾವು

ಹಸುಗಳನ್ನು ತುಂಬಿದ್ದ ಲಾರಿ ಪಲ್ಟಿ: ಚಾಲಕ, ಕ್ಲೀನರ್, 40 ಹಸುಗಳು ಸಾವು

ಆಂಧ್ರಪ್ರದೇಶ: ಹಸುಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಹೊಡೆದಿದ್ದು, ಚಾಲಕ, ಕ್ಲೀನರ್ ಹಾಗೂ 40 ಹಸುಗಳು  ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪರಂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಕ್ರೇನ್‌ ಗಳ ಸಹಾಯದಿಂದ ಜಾನುವಾರುಗಳ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಯಿತು.

 ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪಾಮಿಡಿ ಸರ್ಕಲ್ ಇನ್ಸ್‌ಪೆಕ್ಟರ್ ರೋಶನ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular