Wednesday, May 21, 2025
Google search engine

Homeರಾಜಕೀಯಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾವು ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ತಂದಿದ್ದೇವೆ. ಅದರಿಂದ ಖಾಸಗಿ ಬಸ್ ​ನವರಿಗೆ ನಷ್ಟ ಆಗಿದೆ ಎನ್ನುತ್ತಿದ್ದಾರೆ. ಖಾಸಗಿ ಸಾರಿಗೆಯವರು ನಷ್ಟ ತುಂಬಿಕೊಡಿ ಎಂಬ ಬೇಡಿಕೆ ಇಟ್ಟಿದ್ದಾರೆ. ಸಾರಿಗೆಯವರ ಈ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಈಡೇರಿಸುವಂತೆ ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಮುಷ್ಕರ, ಬಂದ್​ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರ ಹಕ್ಕು. ಎಂದು ಹೇಳಿದರು.

ಖಾಸಗಿ ಸಾರಿಗೆಯವರು ವಾಸ್ತವಕ್ಕೆ ದೂರವಾದ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ. ಖಾಸಗಿ ಬಸ್‌ ನವರು ಶಕ್ತಿ ಯೋಜನೆಯಿಂದ ನಮಗೆ ನಷ್ಟ ಆಗುತ್ತಿದೆ, ಹಣ ಕೊಡಿ ಅಂತ ಕೇಳುತ್ತಿದ್ದಾರೆ, ಅದೆಲ್ಲ ಸಾಧ್ಯವೇ? ಬಂದ್ ಹತ್ತಿಕ್ಕಲು ಅವಕಾಶ ಇಲ್ಲ. ಕಾನೂನಿಗೆ ತೊಂದರೆ ಆಗದ ರೀತಿಯಲ್ಲಿ ಬಂದ್ ಮಾಡಲಿ. ಬೇಡಿಕೆಗಳ ಬಗ್ಗೆ ಸಚಿವ ರಾಮಲಿಂಗರೆಡ್ಡಿ ಗಮನ ಹರಿಸುತ್ತಾರೆ ಎಂದರು.

ರೈತರ ಹಿತದೃಷ್ಟಿ ಕಾಪಾಡುವುದು ನಮಗೆ ಮುಖ್ಯ

ಇನ್ನು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರವಾಗಿ ಮಾತನಾಡಿದ ಅವರು, ನಾವೇನು ಖುಷಿಯಿಂದ ನೀರು ಬಿಡುತ್ತಿಲ್ಲ. ಕಾವೇರಿ ನದಿ ನಿರ್ವಹಣ ಪ್ರಾಧಿಕಾರದ ಆದೇಶದಂತೆ ನೀರು ಬಿಡುತ್ತಿದ್ದೇವೆ. ಸೆ.21ರಂದು ಸುಪ್ರೀಂಕೋರ್ಟ್​ ನಲ್ಲಿ ಕಾವೇರಿ ನದಿ ನೀರಿನ ವಿಚಾರಣೆ ಇದೆ. ನಮ್ಮ ವಕೀಲರು ರಾಜ್ಯದ ವಸ್ತುಸ್ಥಿತಿ ಬಗ್ಗೆ ಮನವರಿಕೆ ಮಾಡುತ್ತಾರೆ. ರಾಜ್ಯದ ರೈತರ ಹಿತದೃಷ್ಟಿ ಕಾಪಾಡುವುದು ನಮಗೆ ಮುಖ್ಯ ಎಂದು ಹೇಳಿದರು.

ಉಬರ್​​​ ವಾಹನದವರ ಮುಷ್ಕರ ರಾಜಕೀಯ ಪ್ರೇರಿತ

ಖಾಸಗಿ ವಾಹನದವರು ಬಂದ್, ಹೋರಾಟ ಮಾಡುವ ಅಗತ್ಯವಿಲ್ಲ. ಖಾಸಗಿ ಬಸ್ ಚಾಲಕರಿಗೆ ಸ್ವಲ್ಪ ಸಮಸ್ಯೆ ಆಗಿದೆ. ಆಟೋ, ಉಬರ್​​​ ವಾಹನದವರ ಮುಷ್ಕರ ರಾಜಕೀಯ ಪ್ರೇರಿತ. ಪ್ರಯಾಣಿಕರಿಗೆ ತೊಂದರೆ ಕೊಡುವುದು ಒಳ್ಳೆಯದಲ್ಲ. ಖಾಸಗಿ ಸಾರಿಗೆ ಒಕ್ಕೂಟದ ಬಗ್ಗೆ ನನಗೆ ಸಿಂಪತಿ ಇದೆ. ಸಮಸ್ಯೆಗೆ ಪರಿಹಾರ ಹುಡುಕುವ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೇರೆ ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸುವ ಕೆಲಸ ಮಾಡುತ್ತೇವೆ. ಪ್ರಯಾಣಿಕರಿಗೆ ತೊಂದರೆ ಮಾಡೋದು ಸರಿಯಲ್ಲ ಅಂದುಕೊಂಡಿದ್ದೇನೆ. ನಾವು ಯಾವ ರೀತಿ ನಿರ್ಧಾರ ಕೈಗೊಳ್ಳಬಹುದು ಎಂಬ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular