Tuesday, July 8, 2025
Google search engine

Homeಅಪರಾಧಪ್ರೇಮ ವಿಫಲತೆ: ಯುವತಿಯ ಮೇಲೆ ಚೂರಿಯಿಂದ ದಾಳಿ ಮಾಡಿ, ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಪ್ರೇಮ ವಿಫಲತೆ: ಯುವತಿಯ ಮೇಲೆ ಚೂರಿಯಿಂದ ದಾಳಿ ಮಾಡಿ, ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು (ದಕ್ಷಿಣ ಕನ್ನಡ): ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್ (30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ಗುರುತಿಸಲಾಗಿದೆ. ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿದುಬಂದಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸಹ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ. ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರುತ್ತದೆ ಎನ್ನಲಾಗಿದ್ದು, ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿದ್ದಿದ್ದು, ಇದನ್ನು ನೋಡಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ದಿವ್ಯಾಳ ಬಾಡಿಗೆ ಮನೆಗೆ ತೆರಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular