ಚಾಮರಾಜನಗರ: ಚಾಮರಾಜನಗರ ನಗರಸಭೆಯ 2023-24ನೇ ಸಾಲಿನ ಪರಿಷ್ಕøತ ಹಾಗೂ 2024-25ನೇ ಸಾಲಿನ ಅಂದಾಜು ಆಯ-ವ್ಯಯ ಸಭೆಯನ್ನು ನಗರಸಭೆ ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 1ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.