ಬಳ್ಳಾರಿ: ಜಿಲ್ಲೆಯಲ್ಲಿ ಸರಕಾರದ ಮಹತ್ವದ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾರ್ಚ್ 11ರಂದು ಖಾತರಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಖಾತರಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ನಡೆಸುವ ಕುರಿತು ಶನಿವಾರ ನಡೆದ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿದರು. ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸೇರಿಸಲು ಪ್ರತಿ ತಾಲೂಕಿನಿಂದ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರಲು ಬಸ್ ವ್ಯವಸ್ಥೆ ಮಾಡುವಂತೆ ತಹಸೀಲ್ದಾರರಿಗೆ ತಿಳಿಸಿದರು.

ಸರ್ಕಾರದ ನಿರ್ದೇಶನದ ಮೇರೆಗೆ ಅರ್ಹ ಫಲಾನುಭವಿಗಳಿಗೆ ಖಾತರಿ ಯೋಜನೆಗಳನ್ನು ತಲುಪಿಸಲು ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಸರ್ಕಾರದ ಖಾತರಿ ಯೋಜನೆಗಳು, ಇತರೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಖಾತರಿ ಸಮಾವೇಶ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ಸಹಾಯಕ ಆಯುಕ್ತ ಹೇಮಂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಪಂ ಇಒಗಳು ಉಪಸ್ಥಿತರಿದ್ದರು.