ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧಿಸಿದಂತೆ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನವನ್ನು 3ನೇ ಎಸಿಜೆಎಂ ನ್ಯಾಯಾಲಯ ವಿಧಿಸಿದೆ.
ಸಹ ಕಲಾವಿದೆ ನೀಡಿದ ದೂರಿನಂತೆ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಮನು ಬಂಧಿತರಾಗಿದ್ದು, ಎರಡು ದಿನಗಳ ಪೊಲೀಸ್ ವಶದ ತನಿಖೆ ನಂತರ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ತನಿಖೆಯ ಬಳಿಕ ನ್ಯಾಯಾಲಯವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.