Sunday, June 1, 2025
Google search engine

Homeಅಪರಾಧಮಡಿಕೇರಿ: ನೇಣು ಬಿಗಿದು ಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ: ನೇಣು ಬಿಗಿದು ಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

RELATED ARTICLES
- Advertisment -
Google search engine

Most Popular