Thursday, February 19, 2026
Google search engine

Homeಸ್ಥಳೀಯಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ

ಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ

ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಾಭಿಷೇಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕಾ ಕಾರ್ಯಕ್ರಮ ಆಯೋಜಿಸಲಾಗಿದೆ.

೧೮ ನೇ ವರ್ಷದ ಮಹಾಭಿಷೇಕಾ ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಪಾಲ್ಗೊಂಡಿದ್ದರು. ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ,ಅರಿಶಿನ ಅಭಿಷೇಕ, ಸೇರಿದಂತೆ ಸುಮಾರು ೩೨ ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

RELATED ARTICLES
- Advertisment -
Google search engine

Most Popular