Wednesday, May 21, 2025
Google search engine

Homeರಾಜ್ಯಮಹಾರಾಷ್ಟ್ರ: ಅಟಲ್ ಸೇತುವೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಮಹಾರಾಷ್ಟ್ರ: ಅಟಲ್ ಸೇತುವೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಮುಂಬೈ: ಮುಂಬೈನ ಅಟಲ್ ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆಯೂ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್ ಪ್ರದೇಶದ ರೀಮಾ ಮುಖೇಶ್ ಪಟೇಲ್(೫೬) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿ ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವಲ್ಲಿ ಸಫಲನಾಗಿದ್ದಾನೆ. ಕೂಡಲೇ ಅಲ್ಲಿಗೆ ಧಾವಿಸಿ ಬಂದ ಗಸ್ತು ಪೊಲೀಸರು ಜೀವ ಪಣಕ್ಕಿಟ್ಟು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂಬೈನಿಂದ ನವಿ ಮುಂಬೈಗೆ ಹೋಗುವ ಮಾರ್ಗದಲ್ಲಿರುವ ಫ್ಲೈಓವರ್‌ನಿಂದ ಮಹಿಳೆ ಸಮುದ್ರಕ್ಕೆ ಹಾರಲು ಯತ್ನಿಸಿದ್ದಾಳೆ. ಮಹಿಳೆಯೂ ಮುಂಬೈನ ಮುಲುಂಡ್ ಪ್ರದೇಶದ ನಿವಾಸಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಚಾಲಕನ ಸಮಯಪ್ರಜ್ಞೆಗೆ ಪೊಲೀಸರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular