Saturday, May 24, 2025
Google search engine

Homeರಾಜಕೀಯಮೈತ್ರಿ ಮುನಿಸು ತಾತ್ಕಾಲಿಕ ಶಮನ ಯಾವುದೇ ಸಮಸ್ಯೆ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಮೈತ್ರಿ ಮುನಿಸು ತಾತ್ಕಾಲಿಕ ಶಮನ ಯಾವುದೇ ಸಮಸ್ಯೆ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸೀಟು ಹಂಚಿಕೆ ಸಂಬಂಧ ನಿನ್ನೆಯಷ್ಟೇ ಬಿಜೆಪಿ ವಿರುದ್ಧ ಮುನಿಸಿಕೊಂಡು ೨ ಸೀಟಿಗಾಗಿ ನಾವು ಇಷ್ಟೇಲ್ಲ ಕಸರತ್ತು ಮಾಡಬೇಕಾ ಎಂದು ಅಸಮಾಧಾನ ಹೊರಹಾಕಿದ್ದ ಮಾಜಿ ಸಿಎಂ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ ೨೮ ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ. ನಮ್ಮ ಮೂರು ಕ್ಷೇತ್ರಗಳಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುವಂತೆ ಕೋರಿದ್ದೇನೆ. ಯಾರೂ ಸಮಯ ವ್ಯರ್ಥ ಮಾಡಬಾರದು. ಆಸ್ಪತ್ರೆಯಿಂದ ಬಂದ ಕೂಡಲೇ ನಾನು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ. ನನ್ನ ಪ್ರಕಾರ ಮಂಡ್ಯ ಸೇರಿ ನಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರೇ ಅಭ್ಯರ್ಥಿಗಳು. ಪಕ್ಷವನ್ನು, ಕಾರ್ಯಕರ್ತರನ್ನು ಗೆಲ್ಲಿಸವುದಕ್ಕಾಗಿ ಎಲ್ಲರೂ ಒಮ್ಮತವಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ. ಇಂದಿನಿಂದಲೇ ಎಲ್ಲರೂ ಚುನಾವಣೆ ಕೆಲಸ ಶುರು ಮಾಡಬೇಕು ಎಂದು ಮಂಡ್ಯ ಕಾರ್ಯಕರ್ತರಿಗೆ ಕರೆ ನೀಡಿದರು.

RELATED ARTICLES
- Advertisment -
Google search engine

Most Popular