Wednesday, May 21, 2025
Google search engine

Homeಸ್ಥಳೀಯಬುಡಕಟ್ಟು ಉತ್ಪನ್ನಗಳನ್ನು ತಯಾರಿಸಿ ಆರ್ಥಿಕವಾಗಿ ಸಬಲರಾಗಿ : ಪ್ರಭಾ ಅರಸ್

ಬುಡಕಟ್ಟು ಉತ್ಪನ್ನಗಳನ್ನು ತಯಾರಿಸಿ ಆರ್ಥಿಕವಾಗಿ ಸಬಲರಾಗಿ : ಪ್ರಭಾ ಅರಸ್

ಮೈಸೂರು: ಕಾಡಿನಲ್ಲಿ ದೊರೆಯುವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಬುಡಕಟ್ಟು ಉತ್ಪನ್ನಗಳನ್ನು ತಯಾರಿಸಿ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್ ತಿಳಿಸಿದರು.

ಮೈಸೂರಿನಲ್ಲಿರುವ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಕರ್ನಾಟಕ ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ, ಕೇರಳ, ತಮಿಳುನಾಡುಗಳಿಂದ ಬಂದಿದ್ದ ಪಿ.ಎಂ. ಜನಮನ್ ಮಾಸ್ಟರ್ ಟ್ರೈನರ್‌ಗಳಿಗೆ ಸೋಮವಾರ ನಡೆದ ೩ ದಿನಗಳ ವಿಭಾಗಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಹಿಂದೆ ಹೆಚ್.ಡಿ. ಕೋಟೆ ತಾಲ್ಲೂಕಿನ ವನದನ ವಿಕಾಸ ಕೇಂದ್ರದ ಸದಸ್ಯರಿಗೆ ಸೋಪು ಮತ್ತು ಪೆನಾಯಿಲ್ ತಯಾರಿಸಲು ತರಬೇತಿ ನೀಡಲಾಗಿತ್ತು. ಅವರು ಯಶಸ್ವಿಯಾಗಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಬುಡಕಟ್ಟು ಜನರಿಗೆ ಏನು ಬೇಕೋ ಅದನ್ನೇ ತರಬೇತಿ ನೀಡಬೇಕು ಎಂದ ಅವರು ಈ ತರಬೇತಿಯಲ್ಲಿ ಕಲಿತ ವಿಷಯಗಳನ್ನು ನಿಮ್ಮ ವನದನಾ ಸದಸ್ಯರಿಗೆ ತರಬೇತಿ ನೀಡಬೇಕು. ಮೂಲಭೂತ ಸೌಲಭ್ಯಗಳನ್ನು ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನೀಡಲಾಗುವುದು. ಈ ಕಾರ್ಯಾಗಾರದ ಸದುಪಯೋಗವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ಮೈಸೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಎಂ.ಕೆ. ಮಲ್ಲೇಶ್, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಸಂಶೋಧನಾಧಿಕಾರಿ ಹೆಚ್.ಎಸ್. ಬಿಂದ್ಯಾ, ನೈಸ್‌ಬಡ್ನ, ಸಂಜಯ್ ಭರತ್‌ವಾಲ್, ಟ್ರೈಫೆಡ್ನ, ಜನರಲ್ ಮ್ಯಾನೇಜರ್ ಸಬ್‌ಜಿತ್ ತರಫ್ದಾರ್, ಅಶ್ವಿನ್‌ಕುಮಾರ್, ಮೋಹನ್‌ಕುಮಾರ್, ತಾಲ್ಲೂಕು ಕಲ್ಯಾಣಾಧಿಕಾರಿಗಳಾದ ಅರುಣ್‌ಪ್ರಭು, ನಾರಾಯಣ್, ಮಹೇಶ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular