ಮಂಡ್ಯ: ಕಾಡು ಹಂದಿ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದು, ಪರಿಹಾರಕ್ಕಾಗಿ ಒತ್ತಾಯಿಸಿ ಕುಟುಂಬಸ್ಥರು ಮಿಮ್ಸ್ ಶವಗಾರದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ನಾಗಮಂಗಲ ರಸ್ತೆಯ ಚಿಕ್ಕಯಗಟಿ ಗ್ರಾಮದ ಬಳಿ ಬೈಕ್ ನಲ್ಲಿ ಗ್ರಾಮಕ್ಕೆ ತೆರಳುವ ವೇಳೆ ಹಂದಿ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ತೋಡೆ ಹಾಗೂ ಮರ್ಮಾಂಗಕ್ಕೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಚಿಂದಗಿರಿದೊಡ್ಡಿ ಗ್ರಾಮದ ಶಿವ(48) ಮೃತ ವ್ಯಕ್ತಿ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಿಮ್ಸ್ ಶವಗಾರಕ್ಕೆ ಮೃತ ದೇಹವನ್ನು ನಾಗಮಂಗಲ ಪೊಲೀಸರು ರವಾನೆ ಮಾಡಿದ್ದಾರೆ.
ಮಂಡ್ಯ ಮಿಮ್ಸ್ ಶವಗಾರದ ಬಳಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದು, ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವ್ಯಕ್ತಿ ಶಿವು ಸಾವನ್ನಪ್ಪಿದ್ದು, ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಅರಣ್ಯಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅಹವಾಲು ಸ್ವೀಕರಿಸಿದ್ದಾರೆ. ಈ ವೇಳೆ ವಯಕ್ತಿಕವಾಗಿ 50ಸಾವಿರ ಪರಿಹಾರ ನೀಡಿದ್ದಾರೆ.
ಮೃತ ವ್ಯಕ್ತಿಯ ಕುಟುಂಬಕ್ಕೆ ಕೆಲಸ ಕೊಡಿಸುವ ಬಗ್ಗೆ ಶಾಸಕ ಭರವಸೆ ನೀಡಿದ್ದಾರೆ. ಅರಣ್ಯಾ ಇಲಾಖೆಯಿಂದ 15 ಲಕ್ಷ ಪರಿಹಾರ ನೀಡುವ ಬಗ್ಗೆ ಘೋಷಿಸಿದ್ದಾರೆ. ಈ ವೇಳೆ ಶಾಸಕ ಗಣಿಗ ರವಿಕುಮಾರ್ ರವರಿಗೆ ಜನರು ಧನ್ಯವಾದ ತಿಳಿಸಿದ್ದಾರೆ.
ಬಳಿಕ ಪ್ರತಿಭಟನೆ ಕೈಬಿಟ್ಟು ಶವಗಾರದ ಬಳಿಯಿಂದ ಮೃತದೇಹವನ್ನು ಗ್ರಾಮಕ್ಕೆ ಕೊಂಡೊಯ್ದಿದ್ದಾರೆ.