ಮಂಗಳೂರು (ದಕ್ಷಿಣ ಕನ್ನಡ): ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಠಾಣಾ ವ್ಯಾಪ್ತಿಯ, ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ದೂರನ್ನು ಸ್ವೀಕರಿಸಿಕೊಂಡು ಧರ್ಮಸ್ಥಳ ಠಾಣೆಯಲ್ಲಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.