ಮಂಡ್ಯ: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿರುವ ವೇಳೆ ನಡೆದ ದುರ್ಘಟನೆಯಲ್ಲಿ ಮೂರೂವರೆ ವರ್ಷದ ಹೃತೀಕ್ಷ ಎಂಬ ಮಗು ಮೃತಪಟ್ಟಿದೆ.
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ ಮತ್ತು ಅಶೋಕ್ ದಂಪತಿಯ ಮಗುವು ನಾಯಿ ಕಚ್ಚಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ನಂದ ಸರ್ಕಲ್ ಬಳಿ ಪೊಲೀಸರು ಅಡ್ಡಗಟ್ಟಿದ್ದಾರೆ. ಅಶೋಕ್ ಓಡಿಸುತ್ತಿದ್ದ ಬೈಕ್ ನಿಲ್ಲಿಸಲಾಗಿದ್ದು, ತಾಯಿಯೊಡನೆ ಮಗು ಬಿದ್ದು ತಲೆಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದೆ.
ತಾಯಿ ಮಗುವನ್ನು ಅಪ್ಪಿಕೊಂಡು ಅಳುತ್ತಿದ್ದ ದೃಶ್ಯ ಭಾವುಕರನ್ನಾಗಿಸಿತು. ಘಟನೆಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.