ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂ 38ನೇ ಪುಣ್ಯ ಸ್ಮರಣೆ ಹಿನ್ನಲೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಲಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಇನ್ನಿತರೆ ಗಣ್ಯರು ಭಾಗಿಯಾಗಿದ್ದರು.