ಬೆಂಗಳೂರು: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಚಿತ್ರ ಬಿಡುಗಡೆಗೆ ತಡೆ ನೀಡುವುದು ಸರಿ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.
ಯಾರಿಗಾದರೂ ಚಿತ್ರ ಇಷ್ಟವಿಲ್ಲದಿದ್ದರೆ ಅದನ್ನು ನೋಡದೆ ಬಿಡಬಹುದೇ ಹೊರತು ತಡೆಹಿಡಿಯುವುದು ಸರಿಯಾದ ಕ್ರಮವಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಚಿತ್ರ ಬಿಡುಗಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದು, ರಾಜ್ಯದಿಂದ ಪ್ರತಿಕ್ರಿಯೆ ಕೇಳಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಇವೆಂಟ್ನಲ್ಲಿ ಕಮಲ್ ಹಾಸನ್ ಕನ್ನಡ ಭಾಷೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಯಿತು ಮತ್ತು ಚಿತ್ರ ಬಿಡುಗಡೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿತ್ತು. ಹೈಕೋರ್ಟ್ ಸಹ ಕ್ಷಮೆ ಕೇಳುವಂತೆ ಪರೋಕ್ಷವಾಗಿ ಸೂಚನೆ ನೀಡಿತ್ತು.