ಮಂಡ್ಯ: ಮಂಡ್ಯದ ಮದ್ದೂರು ತಾಲೂಕಿನ ಮಲ್ಲನಾಯಕನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಕಿರಣ್ ಎಂಬುವರ ಮನೆಯ ಮುಂದೆ ರಾತ್ರಿ ಚಿರತೆ ಓಡಾಟ ನಡೆಸಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಭೀತಿಯಲ್ಲಿದ್ದಾರೆ.

ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.