Thursday, September 11, 2025
Google search engine

Homeಅಪರಾಧಕಾನೂನುಮಂಡ್ಯ ಕಲ್ಲು ತೂರಾಟ ಪ್ರಕರಣ: ಮದ್ದೂರಿಗೆ ತೆರಳುತ್ತಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಮಂಡ್ಯ ಕಲ್ಲು ತೂರಾಟ ಪ್ರಕರಣ: ಮದ್ದೂರಿಗೆ ತೆರಳುತ್ತಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯನ್ನು ಖಂಡಿಸಿ ಮದ್ದೂರಿಗೆ ತೆರಳಲು ಮುಂದಾಗಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ.

ಘಟನೆ ಮಾಧ್ಯಮಗಳಲ್ಲಿ ಬೆಳಕಿಗೆ ಬಂದ ನಂತರ, ಸುಮಾರು 20ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಸಂಘಟಿತವಾಗಿ ವಿಸರ್ಜನೆ ಮಾಡುವಂತಹ ಸಾಮೂಹಿಕ ತಯಾರಿ ನಡೆದಿತ್ತು. ಆದರೆ, ಈ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ನಡೆಯಬಹುದೆಂಬ ಶಂಕೆಯಿಂದಾಗಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಬಸವನಗುಡಿಯ ಠಾಣಾ ವ್ಯಾಪ್ತಿಯಲ್ಲಿ ಪುನೀತ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಪುನೀತ್ ಕೆರೆಹಳ್ಳಿಯ ಮೇಲಿನ ಆರೋಪವೇನು?
ಪುನೀತ್ ಕೆರೆಹಳ್ಳಿ ಅವರು ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳದಿರುವುದಾಗಿ, ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಲು ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರ ಬರೆದು ಕೊಡಬೇಕೆಂದು ದಂಡಾಧಿಕಾರಿಗಳು ಸೂಚಿಸಿದ್ದರು. ಆದರೆ ಅವರು ಈ ಮುಚ್ಚಳಿಕೆ ನೀಡಲು ನಿರಾಕರಿಸಿದ ಕಾರಣ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕ್ರಮ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular